ಶಿವಮೊಗ್ಗ,ಜ.24 (DaijiworldNews/HR): "ನನ್ನ ನಿನ್ನೆಯ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ಅಕ್ರಮ ಗಣಿಗಾರಿಕೆ ನಿಲ್ಲಬೇಕು. ಅರ್ಜಿ ಹಾಕಿ ಸಕ್ರಮ ಮಾಡಿಕೊಳ್ಳಬೇಕು ಎಂದು ಹೇಳಿದ್ದೇನೆ. ಅಕ್ರಮ ಗಣಿಗಾರಿಕೆ ನಡೆದರೆ ಅಧಿಕಾರಿಗಳೇ ಹೊಣೆ" ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ನಿಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಅಕ್ರಮ ಗಣಿಗಾರಿಕೆ ತಕ್ಷಣ ನಿಲ್ಲಿಸಬೇಕು. ಅರ್ಜಿ ಹಾಕಿ ನಂತರ ಪರವಾನಗಿ ಪಡೆಯಬೇಕು" ಎಂದರು.
"ಬೇಬಿ ಬೆಟ್ಟದ ಬಳಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಕೆಆರ್ಎಸ್ ಡ್ಯಾಂಗೆ ಸಮಸ್ಯೆಯಾಗಲಿದೆ. ಗಣಿಗಾರಿಕೆಯನ್ನು ಹಲವು ಬಾರಿ ನಿಲ್ಲಿಸುವಂತೆ ಸೂಚಿಸಲಾಗಿದೆ. ಆದರೂ ಕೆಲವೊಂದು ಕಡೆ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ" ಎಂದು ಹೇಳಿದ್ದಾರೆ.
ಇನ್ನು "ಅಭಿವೃದ್ಧಿ ಕಾರ್ಯಗಳು ನಡೆಯಬೇಕಾದರೆ ಜೆಲ್ಲಿ ಬೇಕು, ಆದರೆ ಅಕ್ರಮ ಗಣಿಗಾರಿಕೆ ನಿಲ್ಲಬೇಕು ಎಂದು ಹೇಳಿದ್ದಾರೆ.