ಬೆಂಗಳೂರ,ಜ.24 (DaijiworldNews/HR): "ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ಎಫ್ಡಿಎ ಹುದ್ದೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆಯನ್ನು ಮುಂದೂಡಲಾಗಿದ್ದು, ಈ ಪ್ರಕರಣ ಸಮಗ್ರ ತನಿಖೆ ನಡೆಸಬೇಕು" ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೇ ನೀಡಿರುವ ಸಿಎಂ, "ಎಫ್ಡಿಎ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಅಪರಾಧವಾಗಿದ್ದು, ಈ ಬಗ್ಗೆ ಅಧಿಕಾರಿಗಳಿಂದ ರಾತ್ರಿಯೇ ಮಾಹಿತಿ ಪಡೆಯಲಾಗಿದ್ದು ಇದರ ಸಮಗ್ರ ತನಿಖೆಗೆ ನಡೆಸಲಿದ್ದು ಈಗಾಗಲೇ 14ಜನರ ಬಂಧವಾಗಿದೆ" ಎಂದರು.
ಇನ್ನು "ಎಫ್ಡಿಎ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಕೂಡ ಅಮಾನತುಗೊಳಿಸುವಂತೆ ಸೂಚಿಸಿದ್ದು, ಅಗತ್ಯ ಬಿದ್ದರೆ ಹುದ್ದೆಯಿಂದ ವಜಾಗೊಳಿಸಲು ಸೂಚಿಸಲಾಗಿದೆ" ಎಂದು ಹೇಳಿದ್ದಾರೆ.