ನವದೆಹಲಿ, ಜ.24 (DaijiworldNews/MB) : ''ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ದೇಶದ ಮಗಳಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು ಸಲಾಂ'' ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.
ದೇಶದಾದ್ಯಂತ ಪ್ರತಿ ವರ್ಷ ಜನವರಿ 24 ಅನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ''ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ನಮ್ಮ ದೇಶದ ಮಗಳಿಗೆ ನಮಸ್ಕರಿಸುತ್ತೇವೆ. ಹೆಣ್ಣು ಮಕ್ಕಳಿಗೆ ಶಿಕ್ಷಣ, ಉತ್ತಮ ಆರೋಗ್ಯ ಸೇವೆ ಮತ್ತು ಲಿಂಗ ಸಂವೇದನೆ ಸುಧಾರಣೆ ಸೇರಿದಂತೆ ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ'' ಎಂದು ಹೇಳಿದ್ದಾರೆ.
''ಈ ದಿನ ಹೆಣ್ಣು ಮಗುವನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವ, ಹೆಣ್ಣು ಘನತೆಯ ಜೀವನ ನಡೆಸಲು ಶ್ರಮಿಸುತ್ತಿರುವ ಎಲ್ಲರನ್ನೂ ವಿಶೇಷವಾಗಿ ಪ್ರಶಂಸಿಸುವ ದಿನ'' ಎಂದು ಕೂಡಾ ಮೋದಿ ಹೇಳಿದ್ದಾರೆ.