ಮಂಗಳೂರು, ಜ 24(DaijiworldNews/SM): ದ.ಕ. ಜಿಲ್ಲೆಯಲ್ಲಿ ಜನವರಿ 24ರ ರವಿವಾರದಂದು 42 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಹಾಗೂ ಉಡುಪಿ ಜಿಲ್ಲೆಯಲ್ಲಿ 17 ಹೊಸ ಪ್ರಕರಣಗಳು ವರದಿಯಾಗಿವೆ.
ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಈವರೆಗೆ ಒಟ್ಟು 5,12,574 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 4,78,971 ಮಾದರಿಗಳು ನೆಗೆಟಿವ್ ಆಗಿವೆ. ಜಿಲ್ಲೆಯಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 33,603ಕ್ಕೆ ಏರಿಕೆಯಾಗಿದೆ. ಈ ಪೈಕಿ ಕೇವಲ 280 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ.
ಇನ್ನು ರವಿವಾರದಂದು 26 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಚೇತರಿಕೆಯ ಸಂಖ್ಯೆ 32,584ಕ್ಕೆ ತಲುಪಿದೆ. ಕೊರೊನಾ ವೈರಸ್ನಿಂದಾಗಿ ರವಿವಾರದಂದು ಒಬ್ಬರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 739ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯ ರವಿವಾರದ ಕೊರೋನಾ ವರದಿ:
ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಇದುವರೆಗೆ 3,28,960 ಮಾದರಿಗಳನ್ನು ಪರೀಕ್ಷಿಸಲಾಗಿದೆ, ಅದರಲ್ಲಿ 3,05,689 ನಕಾರಾತ್ಮಕವಾಗಿವೆ. ರವಿವಾರ 17 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 23,271 ಕ್ಕೆ ತಲುಪಿದೆ. ಈ ಪೈಕಿ ಕೇವಲ 43 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಭಾನುವಾರ ನಾಲ್ಕು ರೋಗಿಗಳನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಒಟ್ಟು ಚೇತರಿಕೆ ಸಂಖ್ಯೆ 23,039 ಕ್ಕೆ ತಲುಪಿದೆ. ಕೊರೋನಾ ವೈರಸ್ನಿಂದಾಗಿ ಇದುವರೆಗೆ 189 ಸಾವುಗಳು ಜಿಲ್ಲೆಯಲ್ಲಿ ವರದಿಯಾಗಿದೆ.