ಉಪ್ಪಿನಂಗಡಿ, ಜ 24(DaijiworldNews/SM): ಕಾರು ಹಾಗೂ ಮಹೀಂದ್ರ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ನಡೆದಿದೆ. ಈ ವೇಳೆ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗುವ ಮೂಲಕ ಸರ್ಕಲ್ ಇನ್ಫೆಕ್ಟರ್ ಉಮೇಶ್ ಉಪ್ಪಳಿಗೆ ಮಾನವೀಯತೆ ಮೆರೆದಿದ್ದಾರೆ.
ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ರಿಟ್ಝ್ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೊಲೆರೋ ವಾಹನಕ್ಕೆ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ರಿಟ್ಝ್ ಚಾಲಕ ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಮಾನವೀಯತೆ ಮೆರೆದ ಸರ್ಕಲ್ ಇನ್ಸ್ ಪೆಕ್ಟರ್
ಇನ್ನು ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವ ಮೂಲಕ ಸರ್ಕಲ್ ಇನ್ಸ್ ಪೆಕ್ಟರ್ ಮಾನವೀಯತೆ ಮೆರೆದಿದ್ದಾರೆ. ತನ್ನ ವಾಹನದಲ್ಲೇ ಗಾಯಾಳುಗಳನ್ನು ಸಾಗಿಸಿ ಸರ್ಕಲ್ ಇನ್ಸ್ ಪೆಕ್ಟರ್ ಉಮೇಶ್ ಉಪ್ಪಳಿಗೆ ಮಾನವೀಯತೆ ಮೆರೆದಿದ್ದಾರೆ. ಸರ್ಕಲ್ ಇನ್ಸ್ ಪೆಕ್ಟರ್ ಅವರ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.