ಭುವನೇಶ್ವರ್, ಜ.25 (DaijiworldNews/HR): ಸಮಯೋಚಿತವಾಗಿ ಮಾಹಿತಿ ತಲುಪಿಸುವ ಉದ್ದೇಶದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಫೋನ್ ನೀಡಲು ಒಡಿಶಾ ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಅಂಗನವಾಡಿ ಕಾರ್ಮಿಕರು ಮತ್ತು ಸಹಾಯಕರ ಸಂಘವು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ತುಕುನಿ ಸಾಹು, "ಮೊಬೈಲ್ ಫೋನ್ಗಳು ಅಂಗನವಾಡಿ ಕಾರ್ಯಕರ್ತೆಯರ ಕೆಲಸವನ್ನು ಬಲಪಡಿಸಲು ಸಹಾಯ ಮಾಡುತ್ತವೆ, ಇನ್ನು ಮಕ್ಕಳ ತೂಕವನ್ನು ಪರೀಕ್ಷಿಸಲು ಪ್ರತಿ ಅಂಗನವಾಡಿ ಕೇಂದ್ರಕ್ಕೆ ತೂಕದ ಯಂತ್ರವನ್ನು ಕೂಡ ನೀಡಲು ಸರ್ಕಾರ ನಿರ್ಧರಿಸಿದೆ" ಎಂದರು.
ಇನ್ನು ಮಹಿಳೆಯರ ಮೇಲಿನ ವಿವಿಧ ರೀತಿಯ ತಾರತಮ್ಯ ಮತ್ತು ದೌರ್ಜನ್ಯಗಳನ್ನು ತಡೆಯುವ ಉದ್ದೇಶದಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ಸಂವಹನ ಪ್ಯಾಕೇಜ್ ಅನ್ನು ಸಹ ಬಿಡುಗಡೆ ಮಾಡಲಾಯಿತು.