ನವದೆಹಲಿ,ಜ.25 (DaijiworldNews/HR): "ರಾಷ್ಟ್ರೀಯ ಮತದಾರರ ದಿನಾಚರಣೆಯು ಯುವಕರಲ್ಲಿ ಜಾಗೃತಿ ಮೂಡಿಸುವ ದಿನವಾಗಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಟ್ವೀಟ್ ಮಾಡಿರುವ ಮೋದಿ, "ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸುವ ಸಲುವಾಗಿ ಹಾಗೂ ಚುನಾವಣೆಗಳನ್ನು ಸುಗಮವಾಗಿ ನಡೆಸುವಂತಾಗಲೂ ಚುನಾವಣಾ ಆಯೋಗವು ನೀಡಿದ ಮಹತ್ವದ ಕೊಡುಗೆಯನ್ನು ಶ್ಲಾಘಿಸುವ ಸಂದರ್ಭವೇ ರಾಷ್ಟ್ರೀಯ ಮತದಾರರ ದಿನ" ಎಂದರು.
ಇನ್ನು ಜನವರಿ 25ನ್ನು ರಾಷ್ಟ್ರೀಯ ಮತದಾರರ ದಿನ ಎಂದು ಆಚರಿಸಲಾಗುತ್ತದೆ.