ಮೈಸೂರು, ಜ.25 (DaijiworldNews/HR): "ಕಾಂಗ್ರೆಸ್ನ ಸದಸ್ಯರನ್ನು ಕರೆದುಕೊಂಡು ಹೋಗಿ ಬಿಜೆಪಿಯವರು ಸರ್ಕಾರ ರಚಿಸಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಕಾಂಗ್ರೆಸ್- ಬಿಜೆಪಿ ಸರ್ಕಾರ" ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಕಾಂಗ್ರೆಸ್ನವರನ್ನು ಕರೆದುಕೊಂಡು ಹೋಗಿ ಗಿಫ್ಟ್ ಕೊಟ್ಟಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಸುಭದ್ರವಾಗಿದೆ. ಎಲ್ಲರೂ ಅತ್ಯಂತ ಒಗ್ಗಟ್ಟಿನಿಂದ ಸಹಕಾರ ಕೊಡುತ್ತಿದ್ದಾರೆ" ಎಂದರು.
ಟ್ರ್ಯಾಕ್ಟರ್ ಜಾಥಾ ಕುರಿತು ಮಾತನಾಡಿದ ಅವರು, "ಜಾಥಾ ತೆರಳುತ್ತಿರುವ ಟ್ರ್ಯಾಕ್ಟರ್ಗಳನ್ನು ಪೊಲೀಸರು ಜಪ್ತಿ ಮಾಡಿದರೆ ಅದನ್ನು ಬಿಡಿಸಿಕೊಳ್ಳಲು ನಾವು ಹೋಗುತ್ತೇವೆ" ಎಂದು ಹೇಳಿದ್ದಾರೆ.
ಇನ್ನು "ಒಂದು ವೇಳೆ ಕಾಂಗ್ರೆಸ್ ಪಕ್ಷವೇ ಆಡಳಿತದಲ್ಲಿದ್ದರೆ ರೈತರ ಪ್ರತಿಭಟನೆಗೆ ಅವಕಾಶ ಕೊಟ್ಟು, ನಾವು ರೈತರಿಗೆ ಬೆಂಬಲ ಕೊಡುತ್ತಿದ್ದೆವು" ಎಂದರು