ಕಾಸರಗೋಡು, ಜ.25 (DaijiworldNews/HR): ಕುಂಡಂಗುಳಿ ಸರಕಾರಿ ಹಯರ್ ಸೆಕಂಡರಿ ಶಾಲೆಯ 20 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಶಾಲೆಯ ಹಯರ್ ಸೆಕಂಡರಿ ಶಾಲೆಯ ವಿದ್ಯಾರ್ಥಿಗೆ ಕೆಲ ದಿನಗಳ ಹಿಂದೆ ಸೋಂಕು ಪತ್ತೆಯಾಗಿದ್ದು, ಈತನ ಸಂಪರ್ಕ ಬೆಳೆಸಿದ್ದ ವಿದ್ಯಾರ್ಥಿಗಳನ್ನು ತಪಾಸಣೆಗೊಳಪಡಿಸಲಾಗಿತ್ತು. ಇದರಲ್ಲಿ ಬಹುತೇಕ ಮಂದಿಗೆ ಪಾಸಿಟಿವ್ ಪತ್ತೆಯಾಗಿದೆ. ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಶಾಲೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ಇನ್ನು ಜಿಲ್ಲೆಯಲ್ಲಿ ಒಟ್ಟು ಸೋಮವಾರ 42 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 45 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 25, 921 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 891 ಮಂದಿ ಗುಣಮುಖರಾಗಿದ್ದಾರೆ. 6236 ಮಂದಿ ನಿಗಾದಲ್ಲಿದ್ದಾರೆ.