ದೆಹಲಿ, ಜ 25(DaijiworldNews/SM): ದೇಶದ ಪ್ರತಿಷ್ಟಿತ ಪ್ರಶಸ್ತಿಗಳಲ್ಲಿ ಒಂದಾಗಿರುವ ಪದ್ಮ ವಿಭೂಷಣ ಪ್ರಶಸ್ತಿಗೆ ಕರಾವಳಿ ಮೂಲದ ಡಾ. ಬಿ.ಎಂ. ಹೆಗ್ಡೆ ಭಾಜಿನರಾಗಿದ್ದಾರೆ.
ಮೆಡಿಕಲ್ ಕ್ಷೇತ್ರದ ತಮ್ಮ ಅಪ್ರತಿಮ ಕೊಡುಗೆ ಹಿನ್ನೆಲೆಯಲ್ಲಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೇಶದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮ, ಪದ್ಮಭೂಷಣ ಮತ್ತು ಪದ್ಮ ವಿಭೂಷಣ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ಒಟ್ಟು 7 ಸಾಧಕರ ಪೈಕಿ ಕರ್ನಾಟಕದ ಕರಾವಳಿ ಮೂಲದ ಖ್ಯಾತ ವೈದ್ಯ ಬಿ.ಎಂ. ಹೆಗ್ಡೆ ಪದ್ಮವಿಭೂಷಣ ಪ್ರಶಸ್ತಿ ಪಡೆದಿದ್ದಾರೆ. ಇನ್ನು ಸಾಹಿತಿ ಚಂದ್ರಶೇಖರ ಕಂಬಾರ ಪದ್ಮಭೂಷಣ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.