ಮಂಗಳೂರು,ಜ 25(DaijiworldNews/SM): ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲಿರುವ ಮಂಗಳೂರು ಪೊಲೀಸ್ ಕಮಿಷನರ್, ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ತುಳುನಾಡಿನ ಜನತೆಗೆ ತುಳುವಿನಲ್ಲಿ ಗಣರಾಜ್ಯ ದಿನದ ಶುಭಾಷಯಗಳನ್ನು ತಿಳಿಸುವ ಮೂಲಕ ತುಳುನಾಡಿನ ಜನತೆಯ ಹೃದಯ ಗೆದ್ದಿದ್ದಾರೆ.
ಪ್ರತಿ ವರ್ಷ ಜನವರಿ 26ರಂದು ದೇಶದಲ್ಲಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಈ ಒಂದು ಸಂದರ್ಭದಲ್ಲಿ ಸಂಭ್ರಮಾಚರಣೆ ನಡೆಸುವ ತುಳುನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು ಎಂಬುವುದಾಗಿ ಕಮಿಷನರ್ ತಿಳಿಸಿದ್ದಾರೆ.
ಇನ್ನು ಈ ಹಿಂದೆ ರೌಡಿಗಳನ್ನು ಪತ್ತೆ ಹಚ್ಚಿ ಅವರ ಪೆರೆಡ್ ನಡೆಸಿ ಅವರಿ ಪಾಠ ಕಲಿಸುವ ಮೂಲಕ ಸುದ್ದಿಯಲ್ಲಿದ್ದರು. ಅಲ್ಲದೆ, ಸಮಾರಂಭಗಳಲ್ಲಿ ಭಕ್ತಿಗೀತೆಗಳನ್ನು ಹಾಡುವ ಮೂಲಕವೂ ಸುದ್ದಿಯಾಗಿದ್ದರು. ಜೊತೆಗೆ ಆರೋಪಿಗಳನ್ನು ತಕ್ಷಣಕ್ಕೆ ಬಂಧಿಸುವಲ್ಲಿ ಕಾರ್ಯಾಚರಣೆ ನಡೆಸುವ ಸಂದರ್ಭದಲ್ಲೂ ಮುಂಚೂಣಿಯಲ್ಲಿದ್ದರು.