ತಿರುವನಂತಪುರ,ಜ.26 (DaijiworldNews/HR): ಸಂಸತ್ತಿಗೆ ಆಯ್ಕೆಯಾಗಿದ್ದ ಮೊದಲ ದಲಿತ ಮಹಿಳೆ ದಾಕ್ಷಾಯಣಿ ವೇಲಾಯುಧನ್ ಅವರ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿಯನ್ನು ಕೇರಳ ಸರ್ಕಾರ ಸ್ಥಾಪಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ, "ಈ ವಾರ್ಷಿಕ ಪ್ರಶಸ್ತಿಯನ್ನು ನಿರ್ಗತಿಕ ಮಹಿಳೆಯ ಸಬಲೀಕರಣಕ್ಕಾಗಿ ಕೆಲಸ ಮಾಡುವ ಮತ್ತು ತಳಸಮುದಾಯದ ಮಹಿಳೆಯರ ಉನ್ನತೀಕರಣಕ್ಕಾಗಿ ಶ್ರಮಿಸುವ ಮಹಿಳೆಯರಿಗೆ ನೀಡಲಾಗುವುದು" ಎಂದರು.
ಇನ್ನು "ಪ್ರಶಸ್ತಿಯು 1 ಲಕ್ಷ ರೂ. ನಗದು ಮತ್ತು ಫಲಕವನ್ನು ಹೊಂದಿದ್ದು, ಪ್ರಶಸ್ತಿ ಸ್ಥಾಪನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಇದೇ ವರ್ಷದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು" ಎಂದು ತಿಳಿಸಿದ್ದಾರೆ.