ಮೈಸೂರು,ಜ.26 (DaijiworldNews/HR): "ಸರಿಯಾದ ವಾತಾವರಣ ಕಂಡು ಬಂದಲ್ಲಿ ಪೂರ್ಣ ಪ್ರಮಾಣದಲ್ಲಿ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು" ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಈ ವರ್ಷ ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ತರಗತಿಗಳು ನಡೆಯುತ್ತಿದ್ದು, ಎರಡೂ ಕಡೆ ಹಾಜರಾತಿ ತೆಗೆದುಕೊಳ್ಳಲಾಗುತ್ತಿದೆ. ಕಾಲೇಜುಗಳಲ್ಲಿ ಶೇ 50ರಷ್ಟು ಹಾಜರಾತಿಯೂ ಇಲ್ಲ ಜೊತೆಗೆ ಯಾರಿಗೂ ಹಾಸ್ಟೆಲ್ ಸಮಸ್ಯೆ ಆಗುತ್ತಿಲ್ಲ. ದೂರದ ಊರಿನಿಂದ ಬರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ನಲ್ಲಿ ಆದ್ಯತೆ ನೀಡಲಾಗುತ್ತಿದೆ. ಶೈಕ್ಷಣಿಕ ವರ್ಷ ವ್ಯರ್ಥವಾಗದಂತೆ ಉತ್ತಮ ವಿದ್ಯಾಭ್ಯಾಸಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ" ಎಂದರು.
ಇನ್ನು "ನೂತನವಾಗಿ ಕಾಲೇಜು, ಪಾಲಿಟೆಕ್ನಿಕ್ಗಳನ್ನು ಆರಂಭಿಸುವ ಯೋಚನೆಯನ್ನು ಸರ್ಕಾರ ಮಾಡಿಲ್ಲ, ಇರುವ ಸಂಸ್ಥೆಗಳ ಗುಣಮಟ್ಟ ಹೆಚ್ಚಿಸುವುದು, ಪ್ರಾಧ್ಯಾಪಕರು, ಉಪನ್ಯಾಸಕರನ್ನು ಒದಗಿಸಿ ಮೂಲಸೌಕರ್ಯ ಹೆಚ್ಚಿಸುವುದಕ್ಕೆ ಆದ್ಯತೆ ನೀಡಲಾಗುವುದು" ಎಂದು ಹೇಳಿದ್ದಾರೆ.