ನವದೆಹಲಿ, ಜ.26 (DaijiworldNews/HR): ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಜ್ಪಥ್ನಲ್ಲಿ 72ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಸಿಡಿಎಸ್ ರಾವತ್ ಸೇರಿದಂತೆ ರಕ್ಷಣಾ ಪಡೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದಾರೆ.
ಧ್ವಜಾರೋಹಣ ನೆರವೇರಿದ ನಂತರ ರಾಜ್ಪಥ್ನಲ್ಲಿ ಪರೇಡ್ ಆರಂಭವಾಗಿದ್ದು, ಪರಮವೀರ ಚಕ್ರ ಮತ್ತು ಅಶೋಕ ಚಕ್ರ ಪುರಸ್ಕೃತರಿಂದ ಪರೇಡ್ ನಡೆಯುತ್ತಿದೆ ಎನ್ನಲಾಗಿದೆ.
ಇನ್ನು ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿದೇಶಿ ಅತಿಥಿ ಭಾಗಿಯಾಗುತ್ತಿಲ್ಲ, ಜೊತೆಗೆ ಬಾಂಗ್ಲಾದೇಶ ವಿಮೋಚನೆಯ 50ನೇ ವರ್ಷದ ನೆನಪಿಗಾಗಿ ಈ ಬಾರಿಯ ಗಣರಾಜ್ಯೋತ್ಸವ ಪರೇಡ್ನಲ್ಲಿ ಬಾಂಗ್ಲಾದೇಶದ ಸೇನಾ ತುಕಡಿ ಭಾಗಿಯಾಗಿರುವು ವಿಶೇಷವಾಗಿದೆ.