ನವದೆಹಲಿ, ಜ.26 (DaijiworldNews/MB) : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತರಿಂದು ಟ್ರಾಕ್ಟರ್ ಪರೇಡ್ ಹಮ್ಮಿಕೊಂಡಿದ್ದು ಈ ಸಂದರ್ಭ ಪೊಲೀಸರು ಹಾಗೂ ರೈತರ ನಡುವೆ ಭಾರೀ ಸಂಘರ್ಷ ಉಂಟಾಗಿದೆ. ಈ ನಡುವೆ ಕಾಂಗ್ರೆಸ್ ಮುಖಂಡ ಸಂಸದ ರಾಹುಲ್ ಗಾಂಧಿ, ''ಹಿಂಸೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ'' ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ''ಹಿಂಸೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಯಾರಿಗಾದರೂ ತೊಂದರೆಯಾದರೆ, ನಮ್ಮ ದೇಶಕ್ಕೆ ಹಾನಿ ಸಂಭವಿಸುತ್ತದೆ ಎಂದು ಹೇಳಿದ್ದು, ದೇಶದ ಹಿತಕ್ಕಾಗಿ ಕೃಷಿ ವಿರೋಧಿ ಕಾನೂನನ್ನು ಹಿಂದಕ್ಕೆ ತೆಗೆದುಕೊಳ್ಳಿ'' ಎಂದು ಆಗ್ರಹಿಸಿದ್ದಾರೆ.
ದೆಹಲಿಯಲ್ಲಿ ರೈತರ ಟ್ರಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ.