ನವದೆಹಲಿ, ಜ.26 (DaijiworldNews/HR): ಇಂದು ರಾಜ್ಪಥ್ನಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿಅಯೋಧ್ಯೆಯ ಪರಂಪರೆಯನ್ನು ಬಿಂಬಿಸುವ ಉತ್ತರ ಪ್ರದೇಶದ ಸ್ತಬ್ಧಚಿತ್ರ ಎಲ್ಲರ ಗಮನಸೆಳೆದಿದೆ.
ಸ್ತಬ್ಧಚಿತ್ರದ ರಾಮಮಂದಿರದ ಮಾದರಿ ಆವರಿಸಿದ್ದರೆ, ಮುಂಭಾಗ ಮಹರ್ಷಿ ವಾಲ್ಮೀಕಿ ಕುಳಿತ ಭಂಗಿಯಲ್ಲಿರುವ ಎತ್ತರದ ಮೂರ್ತಿ ಇದ್ದು, ಇದು ಪ್ರಾಚೀನ ನಗರ ಅಯೋಧ್ಯೆಯ ಪರಂಪರೆ ಬಿಂಬಿಸಲಿದೆ ಎಂದು ಉತ್ತರ ಪ್ರದೇಶದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಸ್ತಬ್ಧಚಿತ್ರದ ಒಂದು ಬದಿಯಲ್ಲಿ ಗಿನ್ನಿಸ್ ದಾಖಲೆಗೆ ಸೇರಿರುವ ಅಯೋಧ್ಯೆಯ ದೀಪೋತ್ಸವ ಆಚರಣೆಯ ವಿವರಗಳಿದ್ದು, ಉಳಿದಂತೆ ಶ್ರೀರಾಮ, ಶಬರಿ, ಅಹಿಲ್ಯಾ, ಹನುಮಾನರ ಉಬ್ಬುಕಲಾಕೃತಿಗಳು ಇದ್ದವು.
ಉತ್ತರ ಪ್ರದೇಶ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ 17 ಸ್ತಬ್ಧಚಿತ್ರಗಳು ಪಥಸಂಚಲನದಲ್ಲಿ ಭಾಗಿಯಾಗಿದ್ದವು.