ಮಂಗಳೂರು, ಜ 26 (DaijiworldNews/SM): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಮಂಗಳವಾರ 19 ಹೊಸ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 33,653ಕ್ಕೆ ಏರಿಕೆಯಾಗಿದೆ. ಈ ಪೈಕಿ 274 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 5,15,739 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 4,82,086 ಪ್ರಕರಣಗಳು ನಕಾರಾತ್ಮಕವಾಗಿವೆ. ಮಂಗಳವಾರ 22 ಜನರನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು 32,640 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 739 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಮಂಗಳವಾರದಂದು ಉಡುಪಿ ಜಿಲ್ಲೆಯಲ್ಲಿ 10 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 23,282ಕ್ಕೆ ಏರಿಕೆಯಾಗಿದೆ. ಈ ಪೈಕಿ 40 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 3,30,542 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 3,07,260 ಮಾದರಿಗಳು ನಕಾರಾತ್ಮಕವಾಗಿವೆ.
ಮಂಗಳವಾರ ಏಳು ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 23,053ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 189 ಸಾವುಗಳು ಸಂಭವಿಸಿವೆ.