ನವದೆಹಲಿ, ಜ 26 (DaijiworldNews/SM): ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಬ್ಯಾರಿಕೇಡ್ ಗಳನ್ನು ದಾಟಿ ಮುನ್ನುಗ್ಗಲು ಯತ್ನಿಸಿದ ಸಂದರ್ಭದಲ್ಲಿ ಟ್ಯಾಕ್ಟರ್ ಒಂದು ಪಲ್ಟಿಯಾಗಿ ಅದರಡಿಯಲ್ಲಿ ಸಿಲುಕಿ ರೈತನೋರ್ವ ಮೃತಪಟ್ಟಿರುವ ಕರಾಳ ಘಟನೆ ನಡೆದಿದೆ.
ರೈತ ಟ್ಯಾಕ್ಟರ್ ಚಲಾಯಿಸಿಕೊಂಡು ಮುನ್ನುಗ್ಗಿದ ಬಳಿಕ ರಸ್ತೆಗೆ ಅಡ್ಡಲಾಗಿ ಇಟ್ಟಿದ್ದ ಬ್ಯಾರಿಕೇಡರ್ ಗಳಿಗೆ ಟ್ಯಾಕ್ಟರ್ ಡಿಕ್ಕಿ ಹೊಡೆಸಿ ಮುನ್ನುಗ್ಗಿದ್ದಾನೆ ಎನ್ನಲಾಗಿದೆ. ಈ ಸಂದರ್ಭ ನಿಯಂತ್ರಣ ಕಳೆದುಕೊಂಡು ಟ್ಯಾಕ್ಟರ್ ಪಲ್ಟಿಯಾಗಿದೆ. ಘಟನಾ ಸ್ಥಳದಲ್ಲೇ ರೈತ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.