ಲಕ್ನೋ, ಜ.27 (DaijiworldNews/PY): "ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ರೈತರ ಟ್ಯ್ರಾಕ್ಟರ್ ರ್ಯಾಲಿ ಸಂದರ್ಭ ನಡೆದ ಹಿಂಸಾಚಾರ ತುಂಬಾ ದುರದೃಷ್ಟಕರ ಹಾಗೂ ಕೇಂದ್ರ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು" ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ರೈತರ ಟ್ಯ್ರಾಕ್ಟರ್ ರ್ಯಾಲಿ ಸಂದರ್ಭ ಏನು ನಡೆಯಿತೋ ಅದು ಸಂಭವಿಸಬಾರದು. ಇದು ತುಂಬಾ ದುರದೃಷ್ಟಕರ ಹಾಗೂ ಕೇಂದ್ರ ಸರ್ಕಾರ ಕೂಡಾ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು" ಎಂದಿದ್ದಾರೆ.
"ಈ ರೀತಿಯಾದ ಯಾವುದೇ ಅಹಿತಕರ ಘಟನೆಗಳು ಮತ್ತೆ ಸಂಭವಿಸದಂತೆ ಮೂರು ಕೃಷಿ ಕಾನೂನುಗಳನ್ನು ತಕ್ಷಣ ಹಿಂತೆದುಕೊಳ್ಳಬೇಕು ಹಾಗೂ ರೈತರು ನಡೆಸುತ್ತಿರುವ ಆಂದೋಲನವನ್ನು ಕೊನೆಗೊಳಿಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ" ಎಂದು ಹೇಳಿದ್ದಾರೆ.