ಕೋಲ್ಕತ್ತ, ಜ.27 (DaijiworldNews/MB) : ಲಘು ಹೃದಯಾಘಾತಕ್ಕೆ ಒಳಗಾದ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ (ಬಿಸಿಸಿಐ) ಹಾಗೂ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಕೋಲ್ಕತ್ತಾದ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಜನವರಿ 2 ರಂದು ಗಂಗೂಲಿ ಅವರಿಗೆ ಲಘು ಹೃದಯಾಘಾತವಾಗಿದ್ದು ವುಡ್ಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿದ್ದರು. ಹೃದಯದ ರಕ್ತನಾಳಗಳಲ್ಲಿ ಬ್ಲಾಕ್ಗಳು ಕಂಡುಬಂದ ಹಿನ್ನೆಲೆ ಆ್ಯಂಜಿಯೊಪ್ಲಾಸ್ಟಿ ನಡೆಸಿ, ಒಂದು ಕಡೆ ಸ್ಟೆಂಟ್ ಅಳವಡಿಸಲಾಗಿತ್ತು. ಜನವರಿ 7 ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ್ದ ಅವರು, "ಚಿಕಿತ್ಸೆ ನೀಡಿದ ಆಸ್ಪತ್ರೆಯ ವೈದ್ಯರಿಗೆ ನಾನು ಧನ್ಯವಾದ ಹೇಳುತ್ತೇನೆ. ನಾನು ಸಂಪೂರ್ಣವಾಗಿ ಗುಣಮುಖನಾಗಿದ್ದೇನೆ" ಎಂದು ಹೇಳಿದ್ದರು.