ನವದೆಹಲಿ, ಜ.27 (DaijiworldNews/PY): "ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೇ ಅಪ್ರಾಪ್ತೆಯ ಸ್ತನಗಳನ್ನು ಸ್ಪರ್ಶಿಸಿದರೆ ಅದನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ" ಎಂದ ಬಾಂಬೆ ಹೈಕೋರ್ಟ್ ಆದೇಶಕ್ಕೆ ಬುಧವಾರ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಪೋಕ್ಸೋ ಪ್ರಕರಣವೊಂದರಲ್ಲಿ ನೇರವಾಗಿ ಶಾರೀರಿಕ ಸಂಪರ್ಕವಾಗಿಲ್ಲ ಎನ್ನುವ ಆಧಾರದ ಮೇಲೆ ಆರೋಪಿಯನ್ನು ಖುಲಾಸೆಗೊಳಿಸಿತ್ತು. ಆದರೆ, ಆರೋಪಿಯ ಖುಲಾಸೆಯಲ್ಲಿ ತಡೆಹಿಡಿದಿರುವ ಸುಪ್ರೀಂ ಈ ವಿಚಾರದ ಬಗ್ಗೆ ಪೂರ್ತಿಯಾಗಿ ವಿವರಣೆ ನೀಡಬೇಕು ಎಂದು ಹೈಕೋರ್ಟ್ಗೆ ತಿಳಿಸಿದೆ.
ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ದ ಸುಪ್ರೀಂ ಕೋರ್ಟ್ನಲ್ಲಿ ಯೂತ್ ಬಾರ್ ಅಸೋಸಿಯೇಷನ್ ಅರ್ಜಿ ದಾಖಲಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ಸರ್ಕಾರ ಹಾಗೂ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿದೆ.