ಮಂಗಳೂರು, ಜ 27 (DaijiworldNews/SM): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಬುಧವಾರ 14 ಹೊಸ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 33,667ಕ್ಕೆ ಏರಿಕೆಯಾಗಿದೆ. ಈ ಪೈಕಿ 258 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 5,17,286 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 4,83,619 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು ಜಿಲ್ಲೆಯಲ್ಲಿ ಒಟ್ಟು ಚೇತರಿಕೆಯ ಸಂಖ್ಯೆ 32,670 ಕ್ಕೆ ತಲುಪಿದೆ. 30 ಜನರನ್ನು ಬುಧವಾರ ಬಿಡುಗಡೆ ಮಾಡಲಾಗಿದೆ.
ಇನ್ನು ಜಿಲ್ಲೆಯಲ್ಲಿ ಈವರೆಗೆ ಒಟ್ಟು 739 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಬುಧವಾರ ಐದು ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 23,288 ಕ್ಕೆ ಏರಿಕೆಯಾಗಿದೆ. ಈ ಪೈಕಿ 38 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 3,31,343ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 3,08,055 ನಕಾರಾತ್ಮಕವಾಗಿವೆ.
ಬುಧವಾರ ಎಂಟು ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಒಟ್ಟು ಬಿಡುಗಡೆಗೊಂಡವರ ಸಂಖ್ಯೆ 23,061ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 189 ಸಾವುಗಳು ಸಂಭವಿಸಿವೆ.