ಜಯಪುರ, ಜ.28 (DaijiworldNews/MB) : ಅನಾರೋಗ್ಯದಿಂದ ಸಿಂದಗಿ ಕ್ಷೇತ್ರದ ಹಿರಿಯ ಶಾಸಕ ಎಂ. ಸಿ ಮನಗೂಳಿ ಅವರು ರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
85 ವರ್ಷ ಪ್ರಾಯದ ಅವರು ಕೊರೊನಾ ಸೋಂಕಿಗೆ ತುತ್ತಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಶಾಸಕರ ಪಾರ್ಥಿವ ಶರೀರದ ಬೆಂಗಳೂರಿನಿಂದ ಸಿಂದಗಿಯತ್ತ ರಸ್ತೆ ಮಾರ್ಗವಾಗಿ ರವಾನಿಸಲಾಗುತ್ತಿದ್ದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಿಂದಗಿ ತಲುಪುವ ಸಾಧ್ಯತೆಯಿದೆ.
ಮನಗೂಳಿ ಅವರು ಎರಡು ಬಾರಿ ಶಾಸಕರಾಗಿದ್ದು ಎರಡು ಬಾರಿಯೂ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.