ಮಂಗಳೂರು, ಜ.28 (DaijiworldNews/MB) : ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಯುವಕನಿಗೆ ಚೂರಿಯಿಂದ ಇರಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ನ ಗಣೇಶ್ಪುರದಲ್ಲಿ ಬುಧವಾರ ರಾತ್ರಿ ನಡೆದಿದೆ.
ದುಷ್ಕರ್ಮಿಗಳು ಜಾಬೀರ್ ಎಂಬವರಿಗೆ ಚೂರಿಯಿಂದ ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಜಾಬೀರ್ ಅವರನ್ನು ಪ್ರಸ್ತುತ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ನಿಂದ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.