ಶಿವಮೊಗ್ಗ, ಜ. 28 (DaijiworldNews/HR): ದುಷ್ಕರ್ಮಿಗಳು ಯುವಕರಿಬ್ಬರಿಗೆ ಚಾಕು ಇರಿದು ಓರ್ವ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗದ ಗಾರ್ಡನ್ ಏರಿಯಾದಲ್ಲಿ ನಡೆದಿದೆ.
ಸಾವನ್ನಪ್ಪಿದ ಯುವಕನ್ನು ಕೆ.ಆರ್.ಪುರಂ ನಿವಾಸಿ ಜೀವನ್ ಎಂದು ಗುರುತಿಸಲಾಗಿದ್ದು, ಸಿಗೇಹಟ್ಟಿಯ ಕೇಶವ್ ಗಂಭೀರ ಗಾಯಗೊಂಡಿದ್ದಾನೆ.
ಗಾರ್ಡನ್ ಏರಿಯಾದ ಸುಂದರಾಶ್ರಯ ಲಾಡ್ಜ್ ಬಳಿ ಯವಕರ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ದಾಳಿ ನಡೆಸಿ ಬಳಿಕ ಪರಾರಿಯಾಗಿದ್ದಾರೆ.
ಇನ್ನು ಈ ಘಟನೆ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಯ ಹಿಂದಿನ ಕಾರಣ ತಿಳಿದು ಬಂದಿಲ್ಲ.