ಬೆಳಗಾವಿ, ಜ.28 (DaijiworldNews/PY): ಒಂದೇ ಕುಟುಂಬದ ನಾಲ್ಕು ಮಂದಿ ರಾಯಬಾಗ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ.27ರ ಬುಧವಾರ ತಡರಾತ್ರಿ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತರನ್ನು ಅದೇ ತಾಲೂಕಿನ ಭಿರಡಿ ಗ್ರಾಮದರಾಗಿದ್ದು, ಸಾತಪ್ಪ ಅಣ್ಣಪ್ಪ ಸುತಾರ (60), ಪತ್ನಿ ಮಹಾದೇವಿ ಸಾತಪ್ಪ ಸುತಾರ (50) ಹಾಗೂ ಮಕ್ಕಳಾದ ಸಂತೋಷ ಸಾತಪ್ಪ ಸುತಾರ (26), ದತ್ತಾತ್ರೇಯ ಸಾತಪ್ಪ ಸುತಾರ (28) ಎಂದು ಗುರುತಿಸಲಾಗಿದೆ.
ಬುಧವಾರ ರಾತ್ರಿ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂಬುದಾಗಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹೇಳಿದ್ದಾರೆ.
ಮೃತದೇಹಗಳನ್ನು ರಾಯಬಾಗ ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.