ಶ್ರೀನಗರ, ಜ.28 (DaijiworldNews/PY): ಜಮ್ಮು-ಕಾಶ್ಮೀರದ ಕುಲ್ಗಾಂನ ಖನಬಾಲ್ನ ಸಂಶೀಪುರದಲ್ಲಿ ಭಾರತೀಯ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮೂವರು ಯೋಧರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಸಾಂದರ್ಭಿಕ ಚಿತ್ರ
ಎಂದಿನಂತೆ ಗಸ್ತು ತಿರುಗುತ್ತಿದ್ದ ಸಂದರ್ಭ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಗಾಯಗೊಂಡಿದ್ದ ನಾಲ್ವರು ಯೋಧರ ಪೈಕಿ ಓರ್ವ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆ ಎಂದು ಸೇನಾಮೂಲಗಳು ತಿಳಿಸಿವೆ.
ಘಟನಾ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದಿವೆ. ಜಂಟಿ ಕಾರ್ಯಚರಣೆ ನಡೆಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.