ತಿರುವನಂತಪುರಂ, ಜ. 28 (DaijiworldNews/HR): "ಕೇಂದ್ರ ಸರ್ಕಾರದ ಜಾರಿಗೊಳಿಸಿರುವ ನೂತನ ಕೃಷಿ ಕಾಯ್ದೆಗಳ ಬಗ್ಗೆಎಲ್ಲಾ ರೈತರು ಅರಿತುಕೊಂಡರೆ ದೇಶವ್ಯಾಪಿ ಬೆಂಕಿ ಹೊತ್ತಿಕೊಳ್ಳಲಿದೆ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, "ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳು ಹೆಚ್ಚಿನ ರೈತರಿಗೆ ಅರ್ಥವಾಗುತ್ತಿಲ್ಲ. ಒಂದು ವೇಳೆ ಅವರಿಗೆ ಅರ್ಥವಾದರೆ ದೇಶವ್ಯಾಪಿ ಪ್ರತಿಭಟನೆಗಳು ಆರಂಭಗೊಳ್ಳುತ್ತವೆ. ದೇಶದಾದ್ಯಂತ ಬೆಂಕಿ ಹೊತ್ತಿಕೊಳ್ಳಲಿದೆ" ಎಂದರು.
ಇನ್ನು "ಕೆಲವು ವರ್ಷಗಳ ಹಿಂದೆ ರೈತರ ಮೇಲೆ ದಾಳಿ ನಡೆದಿರುವುದನ್ನು ನಾನು ಗಮನಿಸಿದ್ದು, ಅವರಿಗೆ ಸಂಬಂಧಿಸಿದ ಭೂಮಿಯನ್ನು ವಶಪಡಿಸಿಕೊಳ್ಳುವ ಹುನ್ನಾರ ನಡೆದಿತ್ತು. ಅದೊಂದು ದೊಡ್ಡ ಸಮಸ್ಯೆ ಎಂದು ನಾನು ಅರಿತುಕೊಂಡೆ. ಆ ವಿಚಾರವಾಗಿ ನಾನು ಕಾಂಗ್ರೆಸ್ ಪಕ್ಷದೊಳಗೆ ಚರ್ಚೆಗಳನ್ನು ಪ್ರಾರಂಭಿಸಿದೆ. ಅದರ ಫಲಿತಾಂಶವೇ ಹೊಸ ಭೂಸ್ವಾಧೀನ ಮಸೂದೆ" ಎಂದು ಹೇಳಿದ್ದಾರೆ.