ಬೆಂಗಳೂರು, ಜ.28 (DaijiworldNews/MB) : ರಾಜ್ಯದಲ್ಲಿ 2020-21 ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಗಳು ಜೂನ್ 14 ರಿಂದ ಜೂನ್ 25 ರ ನಡುವೆ ನಡೆಯಲಿವೆ.
ಗುರುವಾರ ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು, ''ಜೂನ್ 14 ರಿಂದ ಜೂನ್ 25 ರ ನಡುವೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ'' ಎಂದು ತಿಳಿಸಿದರು.
''ಹಾಗೆಯೇ 9ನೇ ತರಗತಿ, ಎಸ್ಎಸ್ಎಲ್ಸಿ, ಪ್ರಥಮ ಮತ್ತು ದ್ವಿತೀಯ ಪಿಯುಸಿ ಫೆ. 1ರಿಂದ ಪೂರ್ಣಾವಧಿ ನಡೆಯಲಿದೆ. 6ರಿಂದ 8ನೇ ತರಗತಿವರೆಗೆ ವಿದ್ಯಾಗಮ ತರಗತಿಗಳೇ ಮುಂದುವರಿಯಲಿದೆ. ಫೆಬ್ರವರಿ ಎರಡನೇ ವಾರದಲ್ಲಿ ಪರಿಸ್ಥಿತಿ ನೋಡಿಕೊಂಡು ತಜ್ಞರ ಬಳಿ ಚರ್ಚಿಸಿ ಇತರೆ ತರಗತಿಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು'' ಎಂದು ತಿಳಿಸಿದರು.
ಕೊರೊನಾ ಲಾಕ್ಡೌನ್ ಕಾರಣದಿಂದ ಮಾರ್ಚ್ನಿಂದ ಶಾಲಾ ಕಾಲೇಜುಗಳು ಮುಚ್ಚಿದ್ದು ಜ.1 ರಿಂದ ಎಸ್ಎಸ್ಎಲ್ಸಿ ತರಗತಿಗಳು ಆರಂಭಗೊಂಡಿದೆ. ಆರಂಭದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದ್ದರೂ ಈಗ ವಿದ್ಯಾರ್ಥಿಗಳ ಹಾಜರಾತಿ ಪ್ರಮಾಣ ಅಧಿಕವಾಗುತ್ತಿದೆ.