ನವದೆಹಲಿ, ಜ.28 (DaijiworldNews/PY): ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ಟ್ಯ್ರಾಕ್ಟರ್ ರ್ಯಾಲಿಯ ಸಂದರ್ಭ ನಡೆದ ಹಿಂಸಾಚಾರದಲ್ಲಿ ಗಾಯಗೊಂಡಿದ್ದ ದೆಹಲಿ ಪೊಲೀಸರ ಆರೋಗ್ಯ ವಿಚಾರಿಸಲು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮಿತ್ ಶಾ ಅವರು ಸಿವಿಲ್ ಲೈನ್ನಲ್ಲಿರುವ ಶ್ರುಶುತ್ ಟ್ರಾಮಾ ಸೆಂಟರ್ ಹಾಗೂ ತೀರತ್ ರಾವ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಪೊಲೀಸರ ಆರೋಗ್ಯ ವಿಚಾರಿಸಿದ್ದಾರೆ.
ನಂತರ ಪ್ರತಿಕ್ರಿಯೆ ನೀಡಿದ ಅವರು, "ನಮಗೆ ನಿಮ್ಮ ಧೀರತೆ ಹಾಗೂ ಧೈರ್ಯದ ಬಗ್ಗೆ ಹೆಮ್ಮೆ ಇದೆ" ಎಂದಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಗಣರಾಜ್ಯೋತ್ಸವ ದಿನದಂದು ನಡೆದ ಟ್ಯ್ರಾಕ್ಟರ್ ರ್ಯಾಲಿಯ ಸಂದರ್ಭ ಹಿಂಸಾಚಾರ ನಡೆದಿದ್ದು, ಸುಮಾರು 400 ಪೊಲೀಸರು ಗಾಯಗೊಂಡಿದ್ದರು.