ಲಖನೌ, ಜ 28 (DaijiworldNews/SM): ದೆಹಲಿಯ ಟ್ರಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಿ ದೇಶದಲ್ಲೇ ವ್ಯಾಪಕ ಸುದ್ದಿಗೆ ಗ್ರಾಸವಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ರೈತರ ಎಲ್ಲಾ ಪ್ರತಿಭಟನೆಗಳನ್ನು ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ.
ಈ ಕುರಿತಂತೆ ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದು ಉತ್ತರ ಪ್ರದೇಶದ ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳು ಮತ್ತು ಎಸ್ ಎಸ್ ಪಿ ಗಳಿಗೆ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಕೂಡಲೇ ರೈತರ ಪ್ರತಿಭಟನೆಗಳನ್ನು ಕೊನೆಗೊಳಿಸುವಂತೆ ಆದೇಶಿಸಿದ್ದಾರೆ. ಅಲ್ಲದೆ, ಉತ್ತರ ಪ್ರದೇಶ-ದೆಹಲಿ ಗಡಿಗಳಲ್ಲಿ ಪಾಲ್ಗೊಳ್ಳುತ್ತಿರುವ ರೈತರನ್ನು ತವರಿಗೆ ಮರಳುವಂತೆ ತಕ್ಷಣ ಆದೇಶ ನೀಡಬೇಕೆಂದು ಅವರು ಆದೇಶ ನೀಡಿದ್ದಾರೆ.