ಮಂಗಳೂರು, ಜ 28 (DaijiworldNews/SM): ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಗುರುವಾರ 34 ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 33,701ಕ್ಕೆ ಏರಿಕೆಯಾಗಿದೆ. ಈ ಪೈಕಿ 281 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಒಟ್ಟು 5,20,272 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 4,86,571 ಮಂದಿಯ ವರದಿ ನಕಾರಾತ್ಮಕವಾಗಿದೆ. ಜಿಲ್ಲೆಯಲ್ಲಿ ಒಟ್ಟು 11 ಜನರನ್ನು ಬಿಡುಗಡೆ ಮಾಡಲಾಗಿದ್ದು, ಈ ಮೂಲಕ ಒಟ್ಟು ಬಿಡುಗಡೆಗೊಂಡವರ ಸಂಖ್ಯೆ 32,681ಕ್ಕೆ ಏರಿಕೆಯಾದಂತಾಗಿದೆ. ಈವರೆಗೆ ಒಟ್ಟು 739 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲಾ ಕೊರೋನಾ ವರದಿ:
ಗುರುವಾರ ಹೊಸದಾಗಿ 14 ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 23,301ಕ್ಕೆ ಏರಿಕೆಯಾಗಿದೆ. ಈ ಪೈಕಿ 46 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 3,32,122 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 3,08,821 ನಕಾರಾತ್ಮಕವಾಗಿವೆ.
ಗುರುವಾರ ಐದು ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 23,066 ಮಂದಿ ಜಿಲ್ಲೆಯಲ್ಲಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 189 ಸಾವುಗಳು ಸಂಭವಿಸಿವೆ.