ಬೆಂಗಳೂರು, ಜ.29 (DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸುವ ಸಲುವಾಗಿ ಇಂದು ಜಂಟಿ ಅಧಿವೇಶನದಲ್ಲಿ ನಡೆಯುವ ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಲು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ನಿರ್ಧರಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಕೃಷಿ ಮಸೂದೆಗಳನ್ನು ವಿರೋಧಿಸಿ ನನ್ನ ರೈತ ಸಹೋದರರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ಇಂದು ರಾಷ್ಟ್ರಪತಿಗಳ ಭಾಷಣಕ್ಕೆ ಹಾಜರಾಗದಿರಲು ನಿರ್ಧರಿಸಿದ್ದೇನೆ" ಎಂದರು.
ಎರಡು ಹಂತಗಳ ಸಂಸತ್ನ ಬಜೆಟ್ ಅಧಿವೇಶನ ಶುಕ್ರವಾರ ಶುರುವಾಗಲಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಉಭಯ ಸದನಗಳನ್ನು ಉದ್ದೇಶಿಸಿ ಇಂದು ಮಾತನಾಡಲಿದ್ದಾರೆ.