ಮಂಗಳೂರು, ಜ. 29 (DaijiworldNews/SM): ದ.ಕ. ಜಿಲ್ಲೆಯ ಆರೋಗ್ಯ ಇಲಾಖೆಯ ವರದಿಯ ಪ್ರಕಾರ ಇಂದು ಜಿಲ್ಲೆಯಲ್ಲಿ ಒಟ್ಟು 26 ಹೊಸ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕು ಪ್ರಕರಣಗಳು 33,727ಕ್ಕೆ ಏರಿಕೆಯಾಗಿದೆ. ಈ ಪೈಕಿ 278 ಪ್ರಕರಣಗಳು ಪ್ರಸ್ತುತ ಸಕ್ರೀಯವಾಗಿದೆ.
ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 5,22,102 ಮಂದಿ ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದು, ಈ ಪೈಕಿ 4,88,375 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು ಶುಕ್ರವಾರದಂದು ಜಿಲ್ಲೆಯಲ್ಲಿ 29 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 739 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಉಡುಪಿ ಜಿಲ್ಲೆಯ ಕೊರೋನಾ ವರದಿ:
ಶುಕ್ರವಾರದಂದು ಜಿಲ್ಲೆಯಲ್ಲಿ ಐದು ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟು ಪತ್ತೆಯಾದ ಸೋಂಕಿತರ ಸಂಖ್ಯೆ 23,306ಕ್ಕೆ ಏರಿಕೆಯಾಗಿದೆ. ಈ ಪೈಕಿ 33 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.
3,33,119 ಮಂದಿ ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದು, 3,09,813 ಮಂದಿಯ ಪರೀಕ್ಷಾ ವರದಿಯಲ್ಲಿ ಕೊರೋನಾ ಪತ್ತೆಯಾಗಿಲ್ಲ. ಶುಕ್ರವಾರದಂದು ಸುಮಾರು18 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯ ತನಕ 189 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.