ನವದೆಹಲಿ, ಜ. 29 (DaijiworldNews/SM): ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಐಇಡಿ ಸ್ಪೋಟಗೊಂಡಿದೆ. ಘಟನೆಯಲ್ಲಿ ಸುಮಾರು ಆರು ವಾಹನಗಳ ಗಾಜುಗಳಿಗೆ ಹಾನಿ ಸಂಭವಿಸಿದೆ ಎಂಬುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಯಿಂದ ಕೇವಲ 50 ಮೀಟರ್ ದೂರದಲ್ಲಿ ಈ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಸಾವು, ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಲಘು ಸ್ಪೋಟಕ್ಕೆ ಕಾರಣವೇನು ಎಂಬುವುದು ತಿಳಿದುಬಂದಿಲ್ಲ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಪ್ರಮುಖ ಪ್ರದೇಶಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ.