ಪುಣೆ,ಜ.30 (DaijiworldNews/HR): ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಕೃಷಿ ಮಸೂದೆ ವಿರುದ್ಧ ಶನಿವಾರದಿಂದ ಧರಣಿ ನಡೆಸಲು ಮುಂದಾಗಿದ್ದು,ಇದೀಗ ಧರಣಿಯಿಂದ ಹಿಂದೆ ಸರಿದಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಿಜೆಪಿ ಹಿರಿಯ ಮುಖಂಡ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಮ್ಮುಖದಲ್ಲಿ ನನ್ನ ನಿರ್ಧಾರವನ್ನು ಘೋಷಿಸಿದ್ದು, ನಾನು ತುಂಬಾ ಸಮಯದಿಂದ ಹಲವಾರು ಸಮಸ್ಯೆಗಳ ಬಗ್ಗೆ ಚಳವಳಿ ನಡೆಸುತ್ತಾ ಬಂದಿದ್ದೇನೆ. ಶಾಂತಿಯುತವಾಗಿ ಪ್ರತಿಭಟಿಸುವುದು ಅಪರಾಧವಲ್ಲ" ಎಂದರು.
ಇನ್ನು "ನನ್ನ 15 ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರ ಸರ್ಕಾರ ಪರಿಶೀಲನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ನಾನು ಶನಿವಾರದಿಂದ ಆರಂಭಿಸಬೇಕಿದ್ದ ಉಪವಾಸ ಸತ್ಯಾಗ್ರಹವನ್ನು ರದ್ದುಗೊಳಿಸಿದ್ದೇನೆ" ಎಂದು ತಿಳಿಸಿದ್ದಾರೆ.