ಮೊರಾದಾಬಾದ್, ಜ.30 (DaijiworldNews/PY): ಉತ್ತರ ಪ್ರದೇಶದ ಮೊರದಾಬಾದ್ನಲ್ಲಿ ಶನಿವಾರ ಬೆಳಗ್ಗೆ ಟ್ರಕ್ ಹಾಗೂ ಬಸ್ನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.
ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಪರಿಶೀಲನೆ ನಡೆಸಿದೆ.
ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ ಪರಿಹಾರ ನೀಡುವುದಾಗಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ.