ತುಮಕೂರು,ಜ.30 (DaijiworldNews/HR): ಕುರುಬ ಸಮುದಾಯವು ಪರಿಶಿಷ್ಟ ಪಂಗಡದ ಮೀಸಲಾತಿಗೆ ಆಗ್ರಹಿಸಿ ಹಮ್ಮಿಕೊಂಡಿರುವ ಪಾದಯಾತ್ರೆ ತುಮಕೂರಿನ ಕೋರ ಗ್ರಾಮ ತಲುಪಿದ್ದು, ಕಾಗಿನೆಲೆ ಕನಕಗುರು ಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಮುಸ್ಲಿಮರ ಮನೆಯಲ್ಲಿ ಪೂಜೆ ಸಲ್ಲಿಸಿ ಉಪಾಹಾರ ಸ್ವೀಕರಿಸಿದ್ದಾರೆ.
ಶನಿವಾರ ಬೆಳಿಗ್ಗೆ 9 ಗಂಟೆಗೆ ಪಾದಯಾತ್ರೆಯು ಕೋರ ತಲುಪಿದ್ದು, ಗ್ರಾಮದ ಮುಸ್ಲಿಂ ಮುಖಂಡ ನಜೀರ್ ಅಹಮದ್ ಮನೆಯಲ್ಲಿ ವಿಶ್ರಾಂತಿ ಪಡೆದು ಬಳಿಕ ಅಲ್ಲಿಯೇ ಶ್ರೀಗಳು ಸ್ನಾನ, ಪೂಜೆ ಕೈಗೊಂಡು ಉಪಾಹಾರ ಸ್ವೀಕರಿಸಿದ್ದಾರೆ.
ಇನ್ನು ಈ ವೇಳೆ ವಿಧಾನ ಪರಿಷತ್ ಸದಸ್ಯ ಹೆಚ್.ಎಂ ರೇವಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ, ಮುರಳೀಧರ ಹಾಲಪ್ಪ ಇತರರು ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.