ಹೈದರಾಬಾದ್, ಜ.30 (DaijiworldNews/HR): ಪೊಲೀಸ್ ಅಧಿಕಾರಿಯೊಬ್ಬರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಸಂಸದರು ಮತ್ತು ಶಾಸಕರಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ಸೆಷೆನ್ಸ್ ಕೋರ್ಟ್ ಆದೇಶ ನೀಡಿದೆ.
ರಾಜಾ ಸಿಂಗ್ ಅವರು 2015ರಲ್ಲಿ ಪೊಲೀಸ್ ಅಧಿಕಾರಿಯೊಬ್ಬರಿಗೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಶಿಕ್ಷೆ ವಿಧಿಸಲಾಗಿದೆ.
ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಜಾ ಸಿಂಗ್, "ನ್ಯಾಯಾಲಯವು ಜಾಮೀನು ನೀಡಿದ್ದು, ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಿದೆ" ಎಂದರು.