ನವದೆಹಲಿ,ಜ.30 (DaijiworldNews/HR): ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಸಮೀಪದಲ್ಲಿ ನಡೆದ ಸ್ಫೋಟ ಸಂಭವಿಸಿದ ಜಾಗದಲ್ಲಿ ಇಬ್ಬರು ವ್ಯಕ್ತಿಗಳು ಕ್ಯಾಬ್ನಿಂದ ಇಳಿದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವುದಾಗಿ ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.
ಆದರೆ ಆ ಇಬ್ಬರು ವ್ಯಕ್ತಿಗಳಿಗೆ ಸ್ಫೋಟದ ಜತೆ ನಂಟಿದೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ ಎನ್ನಲಾಗಿದೆ.
ಇನ್ನು ದೆಹಲಿ ಪೊಲೀಸ್ ವಿಶೇಷ ದಳವು ಕ್ಯಾಬ್ ಚಾಲಕನನ್ನು ಸಂಪರ್ಕಿಸಿ ಆ ಇಬ್ಬರು ವ್ಯಕ್ತಿಗಳ ಬಗ್ಗೆ ವಿಚಾರಿಸಿದ್ದು, ಕ್ಯಾಬ್ ಚಾಲಕ ನೀಡಿದ ಮಾಹಿತಿ ಆಧಾರದಲ್ಲಿ ಶಂಕಿತರ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಹಿದೆ.
ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಬಳಸಿರುವ ಬಗ್ಗೆ ವಿಧಿವಿಜ್ಞಾನ ತಜ್ಞರ ತಂಡ ತಿಳಿಸಿದ್ದು, ಒಂದು ವೇಳೆ ಸಂಚುಕೋರರು ಆರ್ಡಿಎಕ್ಸ್ ಬಳಸಿದ್ದಲ್ಲಿ ಪರಿಣಾಮ ಇನ್ನೂ ತೀವ್ರವಾಗಿರುತ್ತಿತ್ತು ಎಂದು ಮೂಲಗಳು ತಿಳಿಸಿವೆ.
ಇನ್ನು ಸ್ಫೋಟ ಸಂಭವಿಸಿದ ಪ್ರದೇಶದ ಸಮೀಪದ ಮರವೊಂದರ ಹಿಂದೆ ಕ್ಯಾಮರಾ ಒಂದನ್ನು ಅಡಗಿಸಿಟ್ಟಿರುವುದೂ ಪೊಲೀಸರ ಗಮನಕ್ಕೆ ಬಂದಿದೆ.