ನವದೆಹಲಿ,ಜ.30 (DaijiworldNews/HR): ದೆಹಲಿಯ ಗಡಿ ಪ್ರದೇಶಗಳಲ್ಲಿ ಎರಡು ದಿನಗಳವರೆಗೆ ಅಂತರ್ಜಾಲ ಸೇವೆಗಳನ್ನು ಕಡಿತಗೊಳಿಸುತ್ತಿರುವುದಾಗಿ ಕೇಂದ್ರ ಗೃಹ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಎರಡು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು, ಗಾಜಿಪುರ್ ಹಾಗೂ ಟಿಕ್ರಿ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆಗಳನ್ನು ಕಡಿತಗೊಳಿಸಲಾಗಿದೆ.
ಇನ್ನು ಜನವರಿ 29ರ ರಾತ್ರಿ 11ರಿಂದ ಜನವರಿ 31ರ ರಾತ್ರಿ 11ರ ವರೆಗೂ ತಾತ್ಕಾಲಿಕವಾಗಿ ಅಂತರ್ಜಾಲ ಸೇವೆಗಳನ್ನು ಕಡಿತಗೊಳಿಸುವುದು ಅವಶ್ಯವಿರುವುದರಿಂದ ಈ ಆದೇಶ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.