ಮಂಗಳೂರು, ಜ. 30 (DaijiworldNews/SM): ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶನಿವಾರ 28 ಹೊಸ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 33,755ಕ್ಕೆ ಏರಿಕೆಯಾಗಿದೆ. ಈ ಪೈಕಿ 289 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಒಟ್ಟು 5,23,719 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 5,20,344 ನಕಾರಾತ್ಮಕವಾಗಿವೆ. ಶನಿವಾರ 17 ಜನರನ್ನು ಬಿಡುಗಡೆ ಮಾಡಲಾಗಿದೆ. ಈವರೆಗೆ ಒಟ್ಟು 739 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಶನಿವಾರದಂದು ಜಿಲ್ಲೆಯಲ್ಲಿ 13 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 23,319ಕ್ಕೆ ಏರಿಕೆಯಾಗಿದೆ. ಈ ಪೈಕಿ 43 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಈವರೆಗೆ 3,34,240ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 3,10,921 ನಕಾರಾತ್ಮಕವಾಗಿವೆ. ಶನಿವಾರ ಮೂವರನ್ನು ಬಿಡುಗಡೆ ಮಾಡಲಾಗಿದೆ. ಈವರೆಗೆ ಒಟ್ಟು 189 ಸಾವುಗಳು ಸಂಭವಿಸಿವೆ.