ಬೆಂಗಳೂರು, ಜ. 30 (DaijiworldNews/SM): ದೇಶದಲ್ಲಿ ಕೊರೋನಾ ನಿಯಂತ್ರಿಸುವ ದೃಷ್ಟಿಯಲ್ಲಿ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ವಿತರಣೆ ಕೈಗೊಳ್ಳಲಾಗಿದ್ದು, ಈ ಎರಡೂ ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲಸಿಕೆಯ ಬಗ್ಗೆ ಸಾರ್ವಜನಿಕರು ಆತಂಕಪಡುವ ಅವಶ್ಯಕತೆ ಇಲ್ಲ. ಸಾರ್ವಜನಿಕರು ಸುಳ್ಳು ವದಂತಿಗಳಿಗೆ ಕಿವಿಗೊಡದೆ, ಕೇವಲ ಸರ್ಕಾರದ ಅಧಿಕೃತ ಮಾಹಿತಿಯನ್ನು ಮಾತ್ರ ಪರಿಗಣಿಸಬೇಕು.
ರಾಜ್ಯದಲ್ಲಿ ಲಸಿಕೆ ಪಡೆದ ಕೆಲವರಲ್ಲಿ ಸೋಂಕು ಕಾಣಿಸಿಕೊಂಡಿರುವ ಸಂಗತಿ ಬೆಳಕಿಗೆ ಬಂದಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಈ ಹಿನ್ನೆಲೆಯಲ್ಲಿ ಲಸಿಕೆ ಸುರಕ್ಷತೆ ಮತ್ತು ದಕ್ಷತೆ ಬಗ್ಗೆ ಮತ್ತೊಮ್ಮೆ ಆರೋಗ್ಯ ಸಚಿವ ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.