ಶಿರಸಿ, ಜ.31 (DaijiworldNews/PY): "ಈ ವರ್ಷದ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುವ ವಿಶ್ವಾಸವಿದೆ" ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ತಿಳಿಸಿದರು.
ಖಾಸಗಿ ಕಾರ್ಯಕ್ರಮದ ನಿಮಿತ್ತ ರವಿವಾರ ನಗರದ ಎಂಇಎಸ್ ಕಾಲೇಜು ಮೈದಾನದ ಹೆಲಿಪ್ಯಾಡ್ಗೆ ಬಂದಿಳಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದೇಶದಲ್ಲೇ ಕರ್ನಾಟವು ಆರೋಗ್ಯ ಕ್ಷೇತ್ರದಲ್ಲಿ ಮಾದರಿ ರಾಜ್ಯವಾಗಲಿದೆ. ಇವೆಲ್ಲಾ ಅಂಶವನ್ನು ಗಮನದಲ್ಲಿಟ್ಟುಕೊಂಡು ಭಾರಿಯ ಬಜೆಟ್ನಲ್ಲಿ ಮುಖ್ಯಮಂತ್ರಿ ಹೆಚ್ಚಿನ ಅನುದಾನವನ್ನು ಘೋಷಿಸಲಿದ್ದಾರೆ" ಎಂದು ಹೇಳಿದರು.
ಕೊರೊನಾ ವಿತರಣೆಯ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಪಲ್ಸ್ ಪೋಲಿಯೋ ಕಾರ್ಯಕ್ರಮದ ಕಾರಣ ಮೂರು ದಿನ ಕೊರೊನಾ ವ್ಯಾಕ್ಸಿನ್ ವಿತರಣೆಯಾಗುತ್ತಿಲ್ಲ. ಪಲ್ಸ್ ಪೋಲಿಯೋ ಕಾರ್ಯಕ್ರಮದ ನಂತರ ಕೊರೊನಾ ವ್ಯಾಕ್ಸಿನ್ ವಿತರಣೆ ಕಾರ್ಯಕ್ರಮ ಮುಂದುವರೆಯಲಿದೆ" ಎಂದು ತಿಳಿಸಿದರು.
"ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಈಗಾಗಲೇ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಟೆಂಡರ್ ಪ್ರಕ್ರಿಯೆಯು ದಿನಗಳಲ್ಲಿ ಪೂರ್ಣವಾಗಲಿದೆ" ಎಂದರು.