ಬೆಂಗಳೂರು, ಜ.31 (DaijiworldNews/PY): "ಕರ್ನಾಟಕದಲ್ಲಿ ನಡೆಯುವ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಕರ್ನಾಟಕದಲ್ಲಿ ಕನ್ನಡ ಬಳಕೆಗೆ ಕಾನೂನು-ನಿಯಮಗಳು ಅಡ್ಡಬರುತ್ತದೆ ಎಂದಾದರೆ ಮೊದಲು ಅವುಗಳನ್ನು ಕಿತ್ತೆಸೆಯಬೇಕು. ಕರ್ನಾಟಕದಲ್ಲಿ ನಡೆಯುವ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು" ಎಂದಿದ್ದಾರೆ.
"ಕನ್ನಡ ಬಳಕೆ ಬಗ್ಗೆ ಕೇಂದ್ರ ಸರ್ಕಾರದ ನಿಲುವು ಖಂಡನೀಯ. ಈ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಸ್ಪಷ್ಟನೆ ನೀಡಬೇಕು. ಸಿಎಂ ಬಿಎಸ್ವೈ ಅವರು ತಕ್ಷಣ ಕೇಂದ್ರಕ್ಕೆ ಪತ್ರ ಬರೆದು ಈ ಬಗ್ಗೆ ವಿವರಣೆ ಪಡೆದು ರಾಜ್ಯದ ಜನತೆಗೆ ತಿಳಿಸಬೇಕು" ಎಂದು ಆಗ್ರಹಿಸಿದ್ದಾರೆ.