ನವದೆಹಲಿ,ಜ.31 (DaijiworldNews/HR): "ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಶಾಂತಿಯುತವಾಗಿ ಬಗೆಹರಿಸುವ ನಂಬಿಕೆಯನ್ನು ಸರ್ಕಾರ ಹೊಂದಿದೆ" ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ರವಿವಾರ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ನಾನು ಯಾವಾಗಲೂ ಶಾಂತಿಯುತ ಪರಿಹಾರದಲ್ಲೇ ನಂಬಿಕೆಯಿಟ್ಟಿದ್ದೇನೆ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಏನನ್ನು
ಘೋಷಿಸಿದರೋ ಅದು ಬಹಳ ಮುಖ್ಯ" ಎಂದರು.
"ಮುಂದಿನ 18 ತಿಂಗಳು ಕೃಷಿ ಕಾಯ್ದೆಗಳನ್ನು ಅಮಾನತುಗೊಳಿಸುವ ಸರ್ಕಾರದ ಪ್ರಸ್ತಾವನೆಯು ಇನ್ನೂ ರೈತರ ಮುಂದಿದೆ" ಎಂದು ಮೋದಿ ಶನಿವಾರ ಹೇಳಿದ್ದರು.
ಇನ್ನು ಕೇಂದ್ರ ಸರ್ಕಾರವು ನೂತನವಾಗಿ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ವಿರುದ್ಧ ನವೆಂಬರ್ 26ರಿಂದ ರೈತರು ರಾಷ್ಟ್ರ ರಾಜಧಾನಿಯ ವಿವಿಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.