ತಿರುವನಂತಪುರ, ಜ.31 (DaijiworldNews/HR): ಆರೋಗ್ಯದ ದೃಷ್ಟಿಯಿಂದ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹುದ್ದೆಗೆ ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್(97) ಅವರು ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅಚ್ಯುತಾನಂದನ್, "ನಾನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ಗೆ ರಾಜೀನಾಮೆ ಸಲ್ಲಿಸಿದ್ದು, ಅನಾರೋಗ್ಯದಿಂದಾಗಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ" ಎಂದು ತಿಳಿಸಿದ್ದಾರೆ.
ಇನ್ನು ಒಂದು ವರ್ಷಕ್ಕೂ ಅಧಿಕ ಸಮಯದಿಂದ ಅಚ್ಯುತಾನಂದನ್ ಅವರಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಇದು ಆಯೋಗದ ಚಟುವಟಿಕೆಗಳ ಮೇಲೆ ಭಾರೀ ಪರಿಣಾಮಬೀರಿತ್ತು ಎನ್ನಲಾಗಿದೆ.
ಅಚ್ಯುತಾನಂದನ್ ಅವರಿಗೆ ಮೆದುಳು ರಕ್ತಸ್ರಾವದ ಕಾಣಿಸಿಕೊಂಡಿದ್ದು, ಸಂಪೂರ್ಣ ವಿಶ್ರಾಂತಿ ಹಾಗೂ ನಿರಂತರ ವೈದ್ಯಕೀಯ ಆರೈಕೆಯನ್ನು ವೈದ್ಯರು ಶಿಫಾರಸು ಮಾಡಿದ್ದರು.