ಕೋಲ್ಕತ್ತ,ಜ.31 (DaijiworldNews/HR): "ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ" ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.
ಈ ಕುರಿತು ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಅವರು, "ಪ್ರಧಾನಿ ಮೋದಿಯವರು ದೇಶದ 80 ಕೋಟಿ ಜನರಿಗೆ ಎಂಟು ತಿಂಗಳ ಕಾಲ ಉಚಿತವಾಗಿ ಪಡಿತರವನ್ನು ಒದಗಿಸಿದ್ದಾರೆ. ಆದರೆ ಪಶ್ಚಿಮ ಬಂಗಾಳ ಸರ್ಕಾರ ಪಡಿತರವನ್ನು ಲೂಟಿ ಮಾಡಿದೆ" ಎಂದರು.
ಇನ್ನು "ತವರಿಗೆ ಮರಳಿರುವ ವಲಸಿಗ ಕಾರ್ಮಿಕರಿಗೆ ಅವರವರ ಊರುಗಳಲ್ಲಿ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಗರಿಬ್ ಕಲ್ಯಾಣ್ ರೋಜರ್ ಅಭಿಯಾನ್ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆ ಕೂಡ ಸಮಪರ್ಕವಾಗಿ ಜಾರಿಗೆ ತರುವಲ್ಲಿ ಪಶ್ಚಿಮ ಬಂಗಾಳ ಸರ್ಕಾರ ವಿಫಲವಾಗಿದೆ" ಎಂದು ಹೇಳಿದ್ದಾರೆ.