ಬೆಂಗಳೂರು,ಫೆ.01 (DaijiworldNews/HR): 2021-22 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಇಂದು ಮಂಡಿಸಲಾಸಲಾಗಿದ್ದು, ಕೊರೊನಾ ಸಂಕಷ್ಟ ನಡುವೆ ಬಜೆಟ್ ಮಂಡಿಸುತ್ತಿರುವುದು ಸರ್ಕಾರಕ್ಕೆ ಸವಾಲಾಗಿದೆ" ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, "ಕೊರೊನಾದಂತಹ ಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರ ಬಜೆಟ್ ಮಂಡಿಸುತ್ತಿರುವುದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ" ಎಂದರು.
ಇನ್ನು ಈ ಬಾರಿಯ ಬಜೆಟ್ನಲ್ಲಿ ರೈಲ್ವೆ, ಬೆಂಗಳೂರು ಅಭಿವೃದ್ಧಿ ಮತ್ತು ನೀರಾವರಿಗೆ ಹೆಚ್ಚು ಆದ್ಯತೆ ಸಿಗಬೇಕು ಎನ್ನುವುದು ನಮ್ಮ ಬೇಡಿಕೆಯಾಗಿದ್ದು, ಬಜೆಟ್ನಲ್ಲಿ ಇವೆಲ್ಲವನ್ನು ಸೇರಿಸುವಂತೆ ಅನೇಕ ಬಾರಿ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ" ಎಂದು ಹೇಳಿದ್ದಾರೆ.