ನವದೆಹಲಿ, ಫೆ.01 (DaijiworldNews/MB) : ''ಉಜ್ವಲ ಯೋಜನೆಯಡಿ ಮತ್ತೆ 1 ಕೋಟಿ ಕುಟುಂಬಗಳಿಗೆ ಗ್ಯಾಸ್ ಸರಬರಾಜು ವಿಸ್ತರಣೆ ಮಾಡಲಾಗುವುದು'' ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
''ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ಉಜ್ವಲ ಯೋಜನೆಯಡಿ ಈವರೆಗೆ 8 ಕೋಟಿ ಕುಟುಂಬಗಳಿಗೆ ಗ್ಯಾಸ್ ಸರಬರಾಜು ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಇನ್ನೂ 1 ಕೋಟಿ ಕುಟುಂಬಗಳಿಗೆ ಯೋಜನೆ ತಲುಪಿಸುವ ಗುರಿ ಹೊಂದಲಾಗಿದೆ'' ಎಂದು ಬಜೆಟ್ ಮಂಡನೆ ವೇಳೆ ಸೀತಾರಾಮನ್ ತಿಳಿಸಿದ್ದಾರೆ.
''ಮುಂದಿನ ಮೂರು ವರ್ಷಗಳಲ್ಲಿ ಇನ್ನೂ 100 ಜಿಲ್ಲೆಗಳಿಗೆ ಕೇಂದ್ರ ಸರ್ಕಾರದ ಉಜ್ವಲ ಯೋಜನೆ ವಿಸ್ತರಣೆಯಾಗಲಿದೆ. ಇದಕ್ಕಾಗಿ 1 ಸಾವಿರ ಹೊಸ ಗ್ಯಾಸ್ ಏಜೆನ್ಸಿಗಳಿಗೆ ಅವಕಾಶ ನೀಡಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲೂ ಗ್ಯಾಸ್ ಪೈಪ್ಲೈನ್ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ'' ಎಂದು ಸಚಿವೆ ಹೇಳಿದ್ದಾರೆ.